ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತಿ’ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

ನವದೆಹಲಿ: ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತಿ’ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

ಪದ್ಮಾವತಿ ಚಿತ್ರಕ್ಕೆ ಇನ್ನೂ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ದೊರೆತಿಲ್ಲ. ಹೀಗಾಗಿ ಇಂಥ ಅರ್ಜಿಗಳನ್ನು ವಿಚಾರಣೆಗೆ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಚಿತ್ರದಲ್ಲಿರುವ ಯಾವುದೇ ಸಮಸ್ಯೆಗಳ ಇತ್ಯರ್ಥಕ್ಕಾಗಿ ಚಲನಚಿತ್ರ ಪ್ರಮಾಣೀಕರಣ ಮೇಲ್ಮನವಿ ನ್ಯಾಯಮಂಡಳಿ ಇದೆ. ಹಾಗಾಗಿ ಸಂಜಯ್ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದ ವಿರುದ್ಧ

ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಗೆ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.