‘ಮಹಿಳೆಯರನ್ನು ದೇವಾಲಯದಲ್ಲಿ ಪ್ರವೇಶಿಸಲು ನಿರ್ಬಂಧಿಸಿದರೆ ಅದು ಸಂವಿಧಾನ ನೀಡಿರುವ ಸಮಾನತೆಯ ಹಕ್ಕು ಉಲ್ಲಂಘನೆ ಆಗುವುದಿಲ್ಲವೇ ಎಂಬ ಬಗ್ಗೆ ಪರಿಶೀಲಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ನವದೆಹಲಿ(ಫೆ.20): ದಕ್ಷಿಣ ಭಾರತದ ಪ್ರಖ್ಯಾತ ಶ್ರದ್ಧಾ ಕೇಂದ್ರವಾದ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೇ ಬೇಡವೇ ಎಂಬ ವಿವಾದವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೇ ಬೇಡವೇ ಎಂಬ ಕುರಿತ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಕಾಯ್ದಿರಿಸಿದೆ.
ನ್ಯಾ| ದೀಪಕ್ ಮಿಶ್ರಾ ಅವರ ನೇತೃತ್ವದ ತ್ರಿಸದಸ್ಯ ಪೀಠವು ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಿತು. ಈ ವೇಳೆ ಸಂವಿಧಾನ ಪೀಠದ ಮುಂದೆ ಇಡಬಹುದಾದ ಪ್ರಶ್ನೆಗಳನ್ನು ತನಗೆ ಸಲ್ಲಿಸಬೇಕು ಎಂದು ಈ ಪ್ರಕರಣದಲ್ಲಿ ಅಮಿಕಸ್ ಕ್ಯೂರೆ (ಕೋರ್ಟ್ ಸಹಾಯಕ) ಅವರಿಗೆ ಸೂಚಿಸಿ, ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು.
‘ಮಹಿಳೆಯರನ್ನು ದೇವಾಲಯದಲ್ಲಿ ಪ್ರವೇಶಿಸಲು ನಿರ್ಬಂಧಿಸಿದರೆ ಅದು ಸಂವಿಧಾನ ನೀಡಿರುವ ಸಮಾನತೆಯ ಹಕ್ಕು ಉಲ್ಲಂಘನೆ ಆಗುವುದಿಲ್ಲವೇ ಎಂಬ ಬಗ್ಗೆ ಪರಿಶೀಲಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.