ಮದ್ಯಕ್ಕಿಂತ ಮಾನವ ಜೀವಗಳು ಮುಖ್ಯವೆಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 1ರಿಂದ ಹೆದ್ದಾರಿ ಪಕ್ಕದ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನವದೆಹಲಿ (ಮಾ.30): ರಾಷ್ಟ್ರೀಯ ಹೆದ್ದಾರಿಗಳ 500 ಮೀ. ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳಿಗೆ ನಿಷೇಧ ಹೇರಿರುವ ತನ್ನ ಹಿಂದಿನ ತೀರ್ಪನ್ನು ಸಡಿಲಿಸಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ.

ಕುಡಿದು ವಾಹನ ಚಲಾಯಿಸಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 31 ಮಾರ್ಚ್ 2017 ಬಳಿಕ ರಾಷ್ಟ್ರೀಯ ಹೆದ್ದಾರಿಯ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳ ಪರವಾನಿಗೆ ನವೀಕರಿಸಬಾರದೆಂದು ಕಳೆದ ಡಿ.15ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಬಳಿಕ, 500 ಮೀ. ವ್ಯಾಪ್ತಿಯನ್ನು ಕಡೆಮೆಗೊಳಿಸುವಂತೆ ಕೋರಿ ವಿವಿಧ ರಾಜ್ಯಗಳು ಸುಪ್ರೀಂ ಕೋರ್ಟ್'ಗೆ ಮನವಿ ಮಾಡಿದ್ದು, ಕೇಂದ್ರ ಸರ್ಕಾರವು ಕೂಡಾ ಅವುಗಳೊ0ದಿಗೆ ಸಹಮತವನ್ನು ವ್ಯಕ್ತಪಡಿಸಿತ್ತು.

ಆದರೆ, ಮದ್ಯಕ್ಕಿಂತ ಮಾನವ ಜೀವಗಳು ಮುಖ್ಯವೆಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 1ರಿಂದ ಹೆದ್ದಾರಿ ಪಕ್ಕದ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.