ಬರಪೀಡಿತ ಪ್ರದೇಶದ ರೈತರ ಕೃಷಿ ಸಾಲಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನೀಡಿದ ದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ನವದೆಹಲಿ: ಬರಪೀಡಿತ ಪ್ರದೇಶದ ರೈತರ ಕೃಷಿ ಸಾಲಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನೀಡಿದ ದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ದೆಹಲಿಯ ಜಂತರ್ ಮಂತರ್’ನಲ್ಲಿ ತಮಿಳುನಾಡು ರೈತರು 23 ದಿನ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆದೇಶಿಸಿತ್ತು.
ರೈತರ ಸಾಲ ಮನ್ನಾ ಮಾಡಲು ಹಾಗೂ ಅವರಿಂದ ಬಾಕಿ ವಸೂಲು ಮಾಡದಿರಲು ಸಹಕಾರಿ ಸಂಘಗಳಿಗೆ ಮಧುರೈ ಪೀಠದ ಆದೇಶಿಸಿದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಕೇಂದ್ರ ಸರ್ಕಾರವೂ ಕೂಡಾ ಮಧ್ಯ ಪ್ರವೇಶಿಸಬೇಕು, ಹಾಗೂ ತಮಿಳುನಾಡು ಸರ್ಕಾರಕ್ಕೆ ಸಹಾಯಹಸ್ತ ಚಾಚಬೇಕು ಎಂದು ಹೈಕೋರ್ಟ್ ಹೇಳಿತ್ತು.
