ನವದೆಹಲಿ (ಸೆ.11): ಕೇಂದ್ರ ಮತ್ತು ರಾಜ್ಯದಲ್ಲಿ ಲೋಕಪಾಲ್ ಹಾಗೂ ಲೋಕಾಯುಕ್ತ ನೇಮಕಾತಿ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆ.14 ರಂದು ನಡೆಸಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಾಯುಕ್ತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಮೂಲಭೂತ ಸೌಕರ್ಯ ಮತ್ತು ಬಜೆಟ್ ನಲ್ಲಿ ಹಣವನ್ನು ಮೀಸಲಿಡಬೇಕೆಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೋಗಾಯ್ ಮತ್ತು ಪಿ ಸಿ ಪಾಂಟ್ ರವರ ದ್ವಿಸದಸ್ಯ ಪೀಠವನ್ನು ನ್ಯಾಯಾಲಯ ನೇಮಿಸಿದೆ.

ದೆಹಲಿ ಬಿಜೆಪಿ ವಕ್ತಾರ ಹಾಗೂ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ್ ಲೋಕಪಾಲ್, ಲೋಕಾಯುಕ್ತವನ್ನು ನೇಮಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.