ಸುಪ್ರೀಂ ಆದೇಶದಂತೆ ಕರ್ನಾಟಕ ಸರ್ಕಾರ ನೀರು ಹರಿಸುತ್ತಿಲ್ಲ ಎಂದು ತಮಿಳುನಾಡು ಪರ ವಕೀಲ ಶೇಖರ್ ನಾಫಡೆ ವಾದ ಮಂಡಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ರಾಜ್ಯದ ವಕೀಲರಾದ ಫಾಲಿ ಎಸ್. ನಾರಿಮನ್ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.
ನವದೆಹಲಿ(ಮಾ.21): ಸುಪ್ರೀಂ ಕೋರ್ಟ್ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮತ್ತೆ ಬರೆ ಎಳದಿದೆ. ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದೆ.ಜನವರಿ 4 ರಂದು ಈ ಬಗ್ಗೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಮುಂದುವರಿಸುವಂತೆ ಸೂಚನೆ ನೀಡಿದೆ.
ಸುಪ್ರೀಂ ಆದೇಶದಂತೆ ಕರ್ನಾಟಕ ಸರ್ಕಾರ ನೀರು ಹರಿಸುತ್ತಿಲ್ಲ ಎಂದು ತಮಿಳುನಾಡು ಪರ ವಕೀಲ ಶೇಖರ್ ನಾಫಡೆ ವಾದ ಮಂಡಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ರಾಜ್ಯದ ವಕೀಲರಾದ ಫಾಲಿ ಎಸ್. ನಾರಿಮನ್ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು. ಅಂತಿಮವಾಗಿ ಜುಲೈ 11 ರಂದು ಮೇಲ್ಮನವಿ ಅರ್ಜಿಗಳ ಅಂತಿಮ ವಿಚಾರಣೆ ನಡೆಸಲಿದೆ.
