Asianet Suvarna News Asianet Suvarna News

ನಿರ್ಭಯಾ ಪ್ರಕರಣ: ಅತ್ಯಾಚಾರಿಗಳಿಗೆ ಮರಣದಂಡನೆ ಖಾಯಂ

ಚಲಿಸುತ್ತಿರುವ ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪೈಶಾಚಿಕ ಕೃತ್ಯ ಮೆರೆದಿದ್ದ ಆ ಆರೋಪಿಗಳಿಗೆ ಇಡೀ ಮನುಕುಲವೇ ಶಾಪಹಾಕಿತ್ತು. ಆ ಕಟುಕರನ್ನು ಗಲ್ಲಿಗೇರಿಸಲೇ ಬೇಕು ಎಂದು ದೇಶಾದ್ಯಂತ ಹೋರಾಟಗಳು ನಡೆದಿದ್ದವು. ಇದೀಗ ಈ ಪ್ರಕರಣ ಅಂತಿಮ ಹಂತ ತಲುಪಿದೆ.

SC Upholds death to Nirbhaya Rapists

ನವದೆಹಲಿ (ಮೇ.05): ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆ ಮೂಲಕ ಅತ್ಯಾಚಾರಿಗಳಿಗೆ ಮರಣದಂಡನೆ ಖಾಯಂ ಆಗಿದೆ. ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿ ನಾಲ್ವರು ಅಪರಾಧಿಗಳಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆ ಎಂದು ಅಭಿಪ್ರಾಯಪಟ್ಟಿದೆ.

ಚಲಿಸುತ್ತಿರುವ ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪೈಶಾಚಿಕ ಕೃತ್ಯ ಮೆರೆದಿದ್ದ ಆ ಆರೋಪಿಗಳಿಗೆ ಇಡೀ ಮನುಕುಲವೇ ಶಾಪಹಾಕಿತ್ತು. ಆ ಕಟುಕರನ್ನು ಗಲ್ಲಿಗೇರಿಸಲೇ ಬೇಕು ಎಂದು ದೇಶಾದ್ಯಂತ ಹೋರಾಟಗಳು ನಡೆದಿದ್ದವು. ಇದೀಗ ಈ ಪ್ರಕರಣ ಅಂತಿಮ ಹಂತ ತಲುಪಿದೆ.

2012 ಡಿಸೆಂಬರ್ 16ರ ರಾತ್ರಿ ನಡೆದ ಆ ಒಂದು ಪ್ರಕರಣ, ಇಡೀ ದೇಶದ ನಿದ್ದೆ ಗೆಡಿಸಿತ್ತು. ರಾಷ್ಟ್ರ ರಾಜಧಾನಿಯಲ್ಲಿ  ಅಮಾನವೀಯವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ದೆಹಲಿ ಹೈಕೋರ್ಟ್​ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಅಪರಾಧಿಗಳು ಸುಪ್ರೀಂ ಮೊರೆಹೋಗಿದ್ದರು.

Follow Us:
Download App:
  • android
  • ios