ಬೆಂಗಳೂರು:  ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಯಿದೆ. 

ಜನವರಿ 8 ಹಾಗೂ 9ರ ಭಾರತ್ ಬಂದ್‌ಗೆ ಕರೆ ನೀಡಿದ್ದು,   ಮಕ್ಕಳ ಭದ್ರತೆ ಮತ್ತು ರಕ್ಷಣೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.   

ಇದನ್ನೂ ಓದಿ :  ನಾಳೆ, ನಾಡಿದ್ದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

 

ರಾಜ್ಯದಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುವರ್ಣನ್ಯೂಸ್.ಕಾಮ್ ಗೆ  ಪ್ರೈವೇಟ್ ಸ್ಕೂಲ್ ಅಸೋಸಿಯೇಷನ್ ನ ಶಶಿಕುಮಾರ್ ಹೇಳಿದ್ದಾರೆ.

 ಮಕ್ಕಳ ಸುರಕ್ಷತೆ ಮತ್ತು ಅನಾನುಕೂಲ ಎದುರಾಗಲಿದೆ. ಈ ನಿಟ್ಟಿನಲ್ಲಿ ರಜೆ ನೀಡಲಾಗುತ್ತದೆ ಎಂದಿದ್ದಾರೆ.