ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಶ್ರಫ್ ಕಲಾಯಿ ಹತ್ಯೆ ಮಾಡಿದ ಐವರು ಆರೋಪಿಗಳನ್ನ ಬಂಧಿಸಿದ್ದಾರೆ.
ಮಂಗಳೂರು(ಜೂ.24): ದಕ್ಷಿಣ ಕನ್ನಡ ಜಿಲ್ಲೆ ಬಂಟವಾಳದ ಎಸ್'ಡಿಪಿಐ ಮುಖಂಡ ಅಶ್ರಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಶ್ರಫ್ ಕಲಾಯಿ ಹತ್ಯೆ ಮಾಡಿದ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಂತಕರ ಪತ್ತೆಗೆ 5 ಪ್ರತ್ಯೇಕ ತಂಡಗಳು ಕಾರ್ಯಾಚರಣೆ ನಡೆಸಿ ಕೊನೆಗೂ ಆರೋಪಿಗಳನ್ನು ಬಂಧಿಸಿದ್ದಾರೆ.
ರಂಜಿತ್, ಪವನ್, ಸಂತೋಷ್, ಅಭಿ, ಶಿವಪ್ರಸಾದ್ ಬಂಧಿತರು.
ಜೂನ್ 21ರಂದು 3 ಬೈಕ್'ನಲ್ಲಿ ಬಂದ 6 ಆರೋಪಿಗಳು ಅಶ್ರಫ್ ಹತ್ಯೆ ನಡೆಸಿದ್ದರು. ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಅಶ್ರಫ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬಂಟ್ವಾಳ ತಾಲೂಕಿನಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿತ್ತು. ಉದ್ವಿಘ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ. 27ರವರೆಗೂ ಸೆ.144 ಜಾರಿ ಮಾಡಲಾಗಿದೆ.
