ಕುಮಟಾದಲ್ಲಿ ಪಟ್ಟಣದಲ್ಲಿ ಗಲಭೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ

ಕಾರವಾರ (ಡಿ.11): ಕುಮಟಾದಲ್ಲಿ ನಡೆದ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಹೊತ್ತಿ ಉರಿಯುತ್ತಿದೆ. ಸದ್ಯ ಇಲ್ಲಿನ ಕುಮಟಾದಲ್ಲಿ ಗಲಭೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟ್ಟಣದಲ್ಲಿ ಸೆಕ್ಷನ್ 144ರ ಅನ್ವಯವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸದ್ಯ ಕಾರವಾರ ಕುಮಟಾ, ಮುಂಡಗೋಡ ಪಟ್ಟಣದಲ್ಲಿ ಸೂಕ್ತ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಪಿಎಸ್ಐ ಮೇಲೆ ಹಲ್ಲೆ, ಐಜಿಪಿ ಕಾರಿಗೆ ಬೆಂಕಿ ಹಚ್ಚಿದ್ದು, ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.