ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಯಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಿನ್ನೆ ಸಂಜೆ ಗುಂಪು ಘರ್ಷಣೆ ನಡೆದಿತ್ತು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಮತ್ತೆ ಗುಂಪು ಘರ್ಷಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿಯಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಿನ್ನೆ ಸಂಜೆ ಗುಂಪು ಘರ್ಷಣೆ ನಡೆದಿತ್ತು.
ಈ ವೇಳೆ ಪರಸ್ಪರ ಕಲ್ಲು ತೂರಾಟ ನಡೆದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಗಲಭೆ ಬೇರೆ ತಾಲೂಕುಗಳಿಗೂ ವ್ಯಾಪಿಸುವ ಸಾಧ್ಯತೆ ಇರುವುದುರಿಂದ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶ ಹೊರಡಿಸಿದ್ದಾರೆ.