Asianet Suvarna News Asianet Suvarna News

925 ಕೋಟಿ ರೂ ದರೋಡೆ ಯತ್ನ ವಿಫಲಗೊಳಿಸಿದ ಭದ್ರತಾ ಸಿಬ್ಬಂದಿ

ರಾಜಸ್ಥಾನದ ಜೈಪುರದಲ್ಲಿರುವ ಆ್ಯಕ್ಸಿಸ್‌ ಬ್ಯಾಂಕ್‌ನ ಖಜಾನೆಯಲ್ಲಿದ್ದ 925 ಕೋಟಿ ರು. ದರೋಡೆ ಮಾಡುವ ಆಗುಂತಕರ ಕೃತ್ಯವನ್ನು ಬ್ಯಾಂಕಿನ ಭದ್ರತಾ ಸಿಬ್ಬಂದಿ ವಿಫಲಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿನ ಖಜಾನೆಯಲ್ಲಿರುವ ಕೋಟ್ಯಂತರ ರುಪಾಯಿ ದೋಚಿ ಪರಾರಿಯಾಗಲು ಹವಣಿಸಿದ್ದ 12 ಮಂದಿ ಮುಸುಕುಧಾರಿ ದುಷ್ಕರ್ಮಿಗಳು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ತಾವು ಬಂದಿದ್ದ ಕಾರಿನಲ್ಲಿ ವಾಪಸ್‌ ತೆರಳಿದ್ದಾರೆ.

Security Guard succeed to Save Money from Thieves

ನವದೆಹಲಿ (ಫೆ.07): ರಾಜಸ್ಥಾನದ ಜೈಪುರದಲ್ಲಿರುವ ಆ್ಯಕ್ಸಿಸ್‌ ಬ್ಯಾಂಕ್‌ನ ಖಜಾನೆಯಲ್ಲಿದ್ದ 925 ಕೋಟಿ ರು. ದರೋಡೆ ಮಾಡುವ ಆಗುಂತಕರ ಕೃತ್ಯವನ್ನು ಬ್ಯಾಂಕಿನ ಭದ್ರತಾ ಸಿಬ್ಬಂದಿ ವಿಫಲಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿನ ಖಜಾನೆಯಲ್ಲಿರುವ ಕೋಟ್ಯಂತರ ರುಪಾಯಿ ದೋಚಿ ಪರಾರಿಯಾಗಲು ಹವಣಿಸಿದ್ದ 12 ಮಂದಿ ಮುಸುಕುಧಾರಿ ದುಷ್ಕರ್ಮಿಗಳು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ತಾವು ಬಂದಿದ್ದ ಕಾರಿನಲ್ಲಿ ವಾಪಸ್‌ ತೆರಳಿದ್ದಾರೆ.

ಮಂಗಳವಾರ ನಸುಕಿನಲ್ಲಿ ಬ್ಯಾಂಕ್‌ ದರೋಡೆಗೆ ಆಗಮಿಸಿದ 12 ಮಂದಿ ಮುಸುಕುಧಾರಿಗಳು ನಗರದಲ್ಲಿರುವ ಆ್ಯಕ್ಸಿಸ್‌ ಬ್ಯಾಂಕ್‌ನ ಭದ್ರತೆ ನಿಯೋಜನೆಯಾಗಿದ್ದ ಭದ್ರತಾ ಸಿಬ್ಬಂದಿಯನ್ನು ಕಟ್ಟಿಹಾಕಿ, ಬ್ಯಾಂಕಿನ ಕೀಲಿಕೈಗಳನ್ನು ನೀಡುವಂತೆ ಪೀಡಿಸಿದರು. ಆದರೆ, ಭದ್ರತಾ ಸಿಬ್ಬಂದಿ ಇದಕ್ಕೆ ಒಪ್ಪಲಿಲ್ಲ. ಈ ಎಲ್ಲ ಘಟನೆಗಳ ಬಗ್ಗೆ ಬ್ಯಾಂಕಿನ ಒಳಗಿಂದ ಕೇಳಿಸಿಕೊಂಡ ಭದ್ರತಾ ಸಿಬ್ಬಂದಿ, ಬ್ಯಾಂಕ್‌ ಲೂಟಿ ಯತ್ನದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು.

ಅಲ್ಲದೆ, ದುಷ್ಕರ್ಮಿಗಳು ತಮ್ಮ ಬ್ಯಾಂಕಿನೊಳಕ್ಕೆ ಬರದಂತೆ ಎದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರು. ಇದರ ಹೊರತಾಗಿಯೂ, ದರೋಡೆಕೋರರು ಬ್ಯಾಂಕ್‌ನೊಳಕ್ಕೆ ನುಗ್ಗಲು ಮುಂದಾಗಿದ್ದರು. ಅಷ್ಟೊತ್ತಿಗಾಗಲೇ, ಪೊಲೀಸರ ಜೀಪಿನ ಸೈರನ್‌ ಕೇಳಿಸಿತು. ಇದರಿಂದ ತಾವು ಪೊಲೀಸರ ಅತಿಥಿಯಾಗುವುದು ಖಚಿತ ಎಂಬುದಾಗಿ ಗಾಬರಿಗೊಂಡ ಆರೋಪಿಗಳು ತಾವು ಬಂದ ಕಾರಿನಲ್ಲಿ ಎದ್ನೋ-ಬಿದ್ನೋ ಎಂಬಂತೆ ಪರಾರಿಯಾಗಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆದರೆ, ಆರೋಪಿಗಳ ಚಲನವಲನಗಳು ಬ್ಯಾಂಕಿನ ಎದುರು ಅಳವಡಿಸಲಾಗಿರುವ ಸಿಸಿಟೀವಿಯಲ್ಲಿ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಘಟನೆಯಲ್ಲಿ ಭಾಗಿಯಾದವರು ಯಾರು ಎಂಬುದರ ಪತ್ತೆಗಾಗಿ ವಿಡಿಯೋ ಫುಟೇಜ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಇಂಥ ಘಟನೆಗಳು ಮರುಕಳಿಸದಂತೆ ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

 

Follow Us:
Download App:
  • android
  • ios