ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಿನ್ನೆ ಲಾಠಿ ಪ್ರಯೋಗಿಸಿದ್ದು, ಹಲವರು ಗಾಯಗೊಂಡಿದ್ದರು. ಈಗ ಪೊಲೀಸರು 66 ಮಂದಿ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ.

ಚಂಢೀಗಡ(ಏ.12): ಕಾಲೇಜು ಶುಲ್ಕ ಹೆಚ್ಚಳವನ್ನು ಖಂಡಿಸಿ ಪ್ರತಿಭಟಿಸಿದ ಪಂಜಾಬ್ ವಿವಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ‘ದೇಶದ್ರೋಹ’ ಪ್ರಕರಣವನ್ನು ದಾಖಲಿಸಿದೆ.

ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಿನ್ನೆ ಲಾಠಿ ಪ್ರಯೋಗಿಸಿದ್ದು, ಹಲವರು ಗಾಯಗೊಂಡಿದ್ದರು.

ಈಗ ಪೊಲೀಸರು 66 ಮಂದಿ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿರುವ ಚಂಡಿಗಢ ಪೊಲೀಸರ ಕ್ರಮಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

Scroll to load tweet…

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಶುಲ್ಕ ಹೆಚ್ಚಳವನ್ನು ಪ್ರತಿಭಟಿಸುವುದು ಕೂಡಾ ನಮ್ಮ ದೇಶದ್ರೋಹವೇ? ದೇಶದ ಯುವಜನರಿಗೆ ಮಾತನಾಡುವ ಹಕ್ಕಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.