ನಿಡುಮಾಮಿಡಿ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಜೊತೆ ಸಭೆ ನಡೆಸಿದೆ. ಮೂಢನಂಬಿಕೆ ಪ್ರತಿಬಂಧಕ ವಿಧೇಯಕನ್ನು ಜಾರಿ ಮಾಡುವಂತೆ ನಿಯೋಗವು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದೆ.

ಬೆಂಗಳೂರು (ಮೇ.16): ವಿವಿಧ ಪ್ರಗತಿಪರ ಮಠಾಧೀಶರುಗಳು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಭೆ ನಡೆಸಿದ್ದಾರೆ.

ನಿಡುಮಾಮಿಡಿ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಜೊತೆ ಸಭೆ ನಡೆಸಿದೆ. ಸಭೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಗತಿಪರ ಸ್ವಾಮೀಜಿಗಳು ಉಪಸ್ಥಿತರಿದ್ದರು.

ಸಭೆ ಬಳಿಕ ಮಾತನಾಡಿದ ಸಿಎಂ. ಸ್ವಾಮೀಜಿಗಳ ನಿಯೋಗ ಕೂಡಲೇ ಮೂಢನಂಬಿಕೆ ಪ್ರತಿಬಂಧಕ ವಿಧೇಯಕನ್ನು ಜಾರಿ ಮಾಡುವಂತೆ ಮನವಿ ಮಾಡಿಕೊಂಡಿದೆ. ಈ ಕಾಯ್ದೆ ಸಂಬಂಧ ಈಗಾಗಲೇ ಉಪಸಮಿತಿ ರಚನೆ ಮಾಡಿದ್ದೇವೆ. ಈ ಬಗ್ಗೆ ವರದಿ ಬಂದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.