ಬೆಂಗಳೂರು[ಸೆ.1]  ನಂಬೂದರಿ ಹರಿಕೃಷ್ಣ ಅವರು ಕಳೆದ ಬುಧವಾರ ಅಲ್ಲೆಪರ್ತಿ ಗ್ರಾಮದ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದಾದ ಬಳಿಲ ಅವರ ಪಾರ್ಥಿವ ಶರೀರದೊಂದಿಗೆ ಸೆಲ್ಫಿ ತೆಗೆದುಕೊಂಡವರಿಗೆ ಅಮಾನತು ಶಿಕ್ಷೆ ನೀಡಲಾಗಿದೆ.

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ಎನ್ ಟಿ ರಾಮರಾವ್ ಅವರ ಹಿರಿಯ ಪುತ್ರರಾಗಿರುವ ನಂಬೂದರಿ ಹರಿಕೃಷ್ಣ ಅವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ತಕ್ಷಣವೇ ಅವರನ್ನು ನಲ್ಗೊಂದಾ ಜಿಲ್ಲೆಯ ನರ್ಕೇತ್ ಪಲ್ಲಿಯ ಕಾಮಿನೇನಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂದಮೂರಿ ಹರಿಕೃಷ್ಣ ಡೆತ್ ಸಿಕ್ರೇಟ್ ಬಯಲಾಯ್ತು !

ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಪುರುಷ ಸಿಬ್ಬಂದಿ ಸೇರಿದಂತೆ ನಾಲ್ವರು ದಾದಿಯರು ಹರಿಕೃಷ್ಣ ಸೆಲ್ಫಿ ತೆಗೆದುಕೊಂಡಿದ್ದರು. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಸೆಲ್ಫಿ ತೆಗೆದುಕೊಂಡ ನಡುವಳಿಕೆ ಆಸ್ಪತ್ರೆ ಆಡಳಿತ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದೆ.