ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿರುವುದು ಹೊಸ ವಿವಾದದ ಕಿಡಿಯನ್ನು ಹೊತ್ತಿಸಿದೆ.

ನವದೆಹಲಿ (ನ.02): ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿರುವುದು ಹೊಸ ವಿವಾದದ ಕಿಡಿಯನ್ನು ಹೊತ್ತಿಸಿದೆ.

ಉದ್ಧವ್ ಠಾಕ್ರೆ ಹಾಗೂ ಅವರ ಪುತ್ರ ಆದಿತ್ಯ ಠಾಕ್ರೆ ಮುಂಬೈನ ಹೊಟೇಲೊಂದರಲ್ಲಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿದ್ದಾರೆ.

ಉಭಯ ನಾಯಕರು ಮೂರು ತಾಸುಗಳ ಕಾಲ ಮಾತುಕತೆ ನಡೆಸಿದ್ದು, ಡಿಮಾನಿಟೈಸೇಶನ್ ಹಾಗೂ ಜಿಎಸ್'ಟಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಸೇನೆ ಮತ್ತು ಬಿಜೆಪಿ ನಡುವಿನ ಭಿನ್ನಮತ ಸ್ಫೋಟಗೊಂಡಿರುವುದು ಮತ್ತೊಮ್ಮೆ ಸಾಬೀತಾಗಿದೆ.