ಶಾಲೆಗಳಿಗೆ ಮೋದಿ ಕಾರ್ಯಕ್ರಮ ವೀಕ್ಷಿಸಿದ್ದ ದಾಖಲೆ ಕೇಳಿದ ಕೇಂದ್ರ ಸರ್ಕಾರ

First Published 21, Feb 2018, 8:38 AM IST
Send Evidence  to prove students saw PM Modis chat schools Told
Highlights

ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ನಡೆಸಿದ್ದ ‘ಪರೀಕ್ಷಾ ಪರ್ ಚರ್ಚಾ’ ಸಂವಾದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಿಸಿದ್ದ ಬಗ್ಗೆ ದಾಖಲೆ ನೀಡಿ ಎಂದು ಶಾಲೆಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದೆ.

ನವದೆಹಲಿ: ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ನಡೆಸಿದ್ದ ‘ಪರೀಕ್ಷಾ ಪರ್ ಚರ್ಚಾ’ ಸಂವಾದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಿಸಿದ್ದ ಬಗ್ಗೆ ದಾಖಲೆ ನೀಡಿ ಎಂದು ಶಾಲೆಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿದೆ.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಶಾಲೆಯಲ್ಲಿ ವೀಕ್ಷಿಸಿದ್ದಾರೆ ಎಂಬುದಕ್ಕೆ ವಿಡಿಯೋ ಫುಟೇಜ್ ಅಥವಾ ಫೋಟೊಗಳನ್ನು ಸಾಕ್ಷಿಯಾಗಿ ಸಲ್ಲಿಸಲು ರಾಷ್ಟ್ರಾದ್ಯಂತ ಎಲ್ಲ ಶಾಲೆಗಳಿಗೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿ ಸಿದೆ ಎನ್ನಲಾಗಿದೆ. 

ಆದರೆ, ಇಂಥ ಯಾವುದೇ ಸುತ್ತೋಲೆ ಯನ್ನು ಕೇಂದ್ರ ಸರ್ಕಾರ ಅಥವಾ ಇಲಾಖೆ ಹೊರಡಿ ಸಿಲ್ಲ. ಎಂದು ಮಾನವ ಸಂಪನ್ಮೂಲ ಇಲಾಖೆ ಸ್ಪಷ್ಟನೆ ನೀಡಿದೆ.

loader