ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಾಲೂಕಿನ ಕೆಪಿಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಮಂಗಳವಾರ ನೀಡಲಾಯಿತು.

ರಾಯಚೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಾಲೂಕಿನ ಕೆಪಿಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಮಂಗಳವಾರ ನೀಡಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶ್ರಾವಣ ಮಾಸದ ಕಡೆ ಸೋಮವಾರ ರಾಯಚೂರು ಜಿಲ್ಲೆಯ ದೇವಸುಗೂರು ಗ್ರಾಮದ ಶ್ರೀಸುಗೂರೇಶ್ವರ ದೇವಾಲಯಕ್ಕೆ ಕುಟುಂಬ ಸಮೇತ ಆಗಮಿಸಿದ್ದ ದೊಡ್ಡಣ್ಣ ಸೋಮವಾರ ದೇವರ ದರ್ಶನ ಪಡೆದು ರಾತ್ರಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. 

ಬೆಳಗ್ಗೆ ದೇಹದಲ್ಲಿ ಕಡಿಮೆ ರಕ್ತದೊತ್ತಡ (ಲೋ ಬಿಪಿ) ಕಾಣಿಸಿಕೊಂಡ ಪರಿಣಾಮ ಕೊಠಡಿಯ ಬಾತ್‌ರೂಮ್‌ನಲ್ಲಿ ಕುಸಿದುಬಿದ್ದಿದ್ದು, ತಕ್ಷಣ ಅವರನ್ನು ಸಮೀಪದ ಕೆಪಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು.