Asianet Suvarna News Asianet Suvarna News

ಗಣಪತಿ ಆತ್ಮಹತ್ಯೆ: ಸುಪ್ರೀಂನಲ್ಲಿ ಸರ್ಕಾರ ಪರ ಸಿಬಲ್ ವಾದ?

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ  ಸರ್ಕಾರದ ಪರವಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಹಾಗೂ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದಿಸುವ ಸಾಧ್ಯತೆ ಇದೆಯೆನ್ನಲಾಗಿದೆ.

Senior Advocate to Appear Behalf of GOK in DySP Ganapathy Case

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ  ಸರ್ಕಾರದ ಪರವಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಹಾಗೂ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ವಾದಿಸುವ ಸಾಧ್ಯತೆ ಇದೆಯೆನ್ನಲಾಗಿದೆ.

ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 1 ಅಥವಾ 2ರಂದು ದ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ. ಕಪಿಲ್ ಸಿಬಲ್ ರಾಜ್ಯ ಸರ್ಕಾರದ ಪರ ವಾದ ಮಂಡಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸಚಿವ ಕೆ.ಜೆ. ಜಾರ್ಜ್‌ಗೆ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಇದರಿಂದ ಹೊರ ಬರಲು ಸಚಿವ ಜಾರ್ಜ್ ಅವರು ರಾಜ್ಯ ಸರ್ಕಾರದ ಮುಂದೆ ಸಮರ್ಥ ವಕೀಲರನ್ನು ನೇಮಕ ಮಾಡಬೇಕೆಂಬ ಕೋರಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಕಪಿಲ್ ಸಿಬರನ್ನು ನೇಮಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾನೂನು  ಸಚಿವ ಟಿ.ಬಿ. ಜಯಚಂದ್ರ ಜತೆ ಜಾರ್ಜ್ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗಣಪತಿ ಕುಟುಂಬದವರು ಕೋರಿದ್ದರು. ಇದಕ್ಕೆ ಸರ್ಕಾರ ನಿರಾಕರಿಸಿದಾಗ ಗಣಪತಿ ತಂದೆ ಕುಶಾಲಪ್ಪ ಮತ್ತು ತಾಯಿ ಪೂವಮ್ಮ ಅವರು ಹೈಕೋರ್ಟ್ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್’ನಲ್ಲಿ  ಅರ್ಜಿ ವಜಾಗೊಂಡಿತ್ತು.

ನಂತರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ ಗಣಪತಿ ಕುಟುಂಬ, ಅಲ್ಲೂ ಅರ್ಜಿ ವಜಾಗೊಂಡಿತ್ತು.

ನಂತರ ಗಣಪತಿ ಪೋಷಕರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಇದರ ವಿಚಾರಣೆ ಸೆ. 1 ಅಥವಾ 2ರಂದು ನಡೆಯುವ ಸಾಧ್ಯತೆಯಿದೆ.

Follow Us:
Download App:
  • android
  • ios