ನವದೆಹಲಿ [ಆ.23]:  ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರಿಶೀಲನಾ ಸಮಿತಿಯಲ್ಲಿ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ಥಾನ ಪಡೆದಿದ್ದಾರೆ. 

ಈ ಮೂಲಕ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಹೊಸ ಜವಾಬ್ದಾರಿಯೊಂದು ದೊರಕಿದಂತಾಗಿದೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಖರ್ಗೆ ಅವರು ಮಹಾರಾಷ್ಟ್ರ ಕಾಂಗ್ರೆಸ್‌ನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ ಸಮಿತಿಯ ಅಧ್ಯಕ್ಷರಾಗಿದ್ದು ಹರೀಶ್‌ ಚೌದರಿ, ಮಣಿಕಂ ಟಾಗೋರ್‌, ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ಬಾಲಸಾಹೇಬ್ ಥೋರಾಟ್‌ ಮತ್ತು ಶಾಸಕಾಂಗ ಪಕ್ಷದ ನಾಯಕ ಕೆ.ಸಿ.ಪಡವಿ ಅವರು ಸಮಿತಿಯಲ್ಲಿ ಇರಲಿದ್ದಾರೆ.