1925ರ ಮೇ 24ರಂದು ಮೈಸೂರಿನಲ್ಲಿ ಜನಿಸಿದ ಅವರು, ಮಂಡ್ಯ ಹಾಗೂ ಮೈಸೂರಿನಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಿದ್ದರು. 1953ರಲ್ಲಿ ಪ್ರಜಾವಾಣಿ ಬಳಗ ಸೇರಿದ ಸಿಂಗ್, ಪ್ರಜಾವಾಣಿ, ಸುಧಾ, ಮಯೂರ ಪತ್ರಿಕೆಗಳ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಬೆಂಗಳೂರು(ಅ.26): ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಎಂ.ಬಿ. ಸಿಂಗ್(91) ಅವರು ಮಂಗಳವಾರ ರಾತ್ರಿ ಸಹಕಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

1925ರ ಮೇ 24ರಂದು ಮೈಸೂರಿನಲ್ಲಿ ಜನಿಸಿದ ಅವರು, ಮಂಡ್ಯ ಹಾಗೂ ಮೈಸೂರಿನಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಿದ್ದರು. 1953ರಲ್ಲಿ ಪ್ರಜಾವಾಣಿ ಬಳಗ ಸೇರಿದ ಸಿಂಗ್, ಪ್ರಜಾವಾಣಿ, ಸುಧಾ, ಮಯೂರ ಪತ್ರಿಕೆಗಳ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.

ಸಿಂಗ್ ಅವರಿಗೆ ಮಾಧ್ಯಮಕ್ಷೇತ್ರದ ಸೇವೆಗೆ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ', ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ, ಖಾದ್ರಿ ಶಾಮಣ್ಣ ಪ್ರಶಸ್ತಿಗಳು ಬಂದಿವೆ.

ಸಿಂಗ್ ಅವರ ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದೆ.