ರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು  ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್  ಅಡ್ಡಗಾಲಾಗಿದ್ದು ಪುತ್ರಿ ಸೌಮ್ಯ ರೆಡ್ಡಿಗೆ ಟಿಕೆಟ್ ನೀಡಿರುವ ಕಾರಣ ಸಚಿವ ಸ್ಥಾನ ನೀಡುವ ಅಗತ್ಯವಿಲ್ಲ ಎಂದು ಹೈಕಮಾಂಡ್'ಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.  

ಬೆಂಗಳೂರು(ಮೇ.31): ಸತತ 7 ಬಾರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿಗೆ ಮೈತ್ರಿ ಸರ್ಕಾರದಲ್ಲಿ ಸಚಿವಸ್ಥಾನ ಕೈತಪ್ಪುವ ಸಾಧ್ಯತೆಯಿದೆ.

ರಾಮಲಿಂಗಾ ರೆಡ್ಡಿ ಸೇರಿದಂತೆ ಕೆಲವು ಹಿರಿಯ ಶಾಸಕರಿಗೆ ಸಚಿವ ಸ್ಥಾನ ದೊರಕುವುದು ಅನುಮಾನವಾಗಿದೆ. ರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅಡ್ಡಗಾಲಾಗಿದ್ದು ಪುತ್ರಿ ಸೌಮ್ಯ ರೆಡ್ಡಿಗೆ ಟಿಕೆಟ್ ನೀಡಿರುವ ಕಾರಣ ಸಚಿವ ಸ್ಥಾನ ನೀಡುವ ಅಗತ್ಯವಿಲ್ಲ ಎಂದು ಹೈಕಮಾಂಡ್'ಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಇಬ್ಬರ ನಡುವೆಯೂ ಮುಸುಕಿನ ಗುದ್ದಾಟ ನಡೆಯುತ್ತಿದ್ದು ಯಾರ ಕೈ ಮೇಲಾಗುತ್ತದೆಂದು ಕಾದು ನೋಡ ಬೇಕಿದೆ. ನಾಳೆ ಬಹುತೇಕ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆಯಾಗಲಿದ್ದು ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಹಣಕಾಸು ಇಲಾಖೆ ಜೆಡಿಎಸ್'ಗೆ ನೀಡುವುದಾಗಿ ಕಾಂಗ್ರೆಸ್ ನಾಯಕರು ಒಪ್ಪಿಕೊಂಡಿದ್ದಾರೆ.