ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ.

ಬೆಂಗಳೂರು: ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಸವ ತತ್ವವನ್ನು ಪಾಲಿಸುವ ಲಿಂಗಾಯತರು, ವೀರಶೈವರು ಹಾಗೂ ಇತರರನ್ನು ಸೇರಿಸಿ ಲಿಂಗಾಯತ ಧರ್ಮ ಸ್ಥಾಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಈ ಬಗ್ಗೆ ತೆಗೆದುಕೊಂಡ ನಿರ್ಧಾರಕ್ಕೆ ಪ್ರತಿಕ್ರಿಯೆ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಸಚಿವ ಸಂಪುಟ ಸಭೆಯ ನಿರ್ಧಾರ ತಿಳಿಸಲು ಒಬ್ಬರು ಸಚಿವರಿದ್ದಾರೆ. ನಾನು ಈ ಬಗ್ಗೆ ಮಾತನಾಡುವುದಿಲ್ಲ. ಇದರ ಬಗ್ಗೆ ನನ್ನನ್ನು ಕೇಳಬೇಡಿ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.