ಪ್ರತ್ಯೇಕ ಲಿಂಗಾಯತ ಧರ್ಮ: ಎರಡು ಬಣಗಳ ನಡುವೆ ಮಾರಾಮಾರಿ

First Published 19, Mar 2018, 5:46 PM IST
Separate lingayata religion quarrel between two groups
Highlights

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.

ಕಲಬುರಗಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.

ಪಟೇಲ್ ವೃತ್ತದಲ್ಲಿ ವೀರಶೈವ ಲಿಂಗಾಯತರ ಪ್ರತಿಭಟನೆ ವೇಳೆ ಪರಸ್ಪರ ಹೊಡೆದಾಟ ನಡೆದಿದೆ. ಪ್ರತ್ಯೇಕ ಲಿಂಗಾಯತ ಧರ್ಮ ವಿರೋಧಿಸಿ, ವೀರಶೈವ ಲಿಂಗಾಯತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು.

ಪರ-ವಿರೋಧಗಳ ನಡುವೆಯೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಸರಕಾರ ಅನುಮೋದನೆ ನೀಡಿದೆ. ಬಸವ ತತ್ವವನ್ನು ಪಾಲಿಸುವ ಲಿಂಗಾಯತರು, ವೀರಶೈವರು ಹಾಗೂ ಇತರರನ್ನು ಸೇರಿಸಿ ಲಿಂಗಾಯತ ಧರ್ಮ ಸ್ಥಾಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಕೇಂದ್ರಕ್ಕೆ ಶಿಪಾರಸು ಮಾಡಲು, ರಾಜ್ಯ ಸರಕಾರ ನಿರ್ಧರಿಸಿದೆ.

loader