ಕಲಬುರಗಿಯ ಸರ್ದಾರ್ ವಲ್ಲಭಬಾಯಿ ವೃತ್ತದ ಬಳಿ ಪ್ರತ್ಯೇಕ 'ಕಲ್ಯಾಣ ಕರ್ನಾಟಕ' ಧ್ವಜಾರೋಹಣಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಕಲಬುರಗಿ(ನ.01): ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲೇ ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಕಲಬುರಗಿಯಲ್ಲಿ ಪ್ರತ್ಯೇಕತೆಯ ಕೂಗು ಮೊಳಗಿದೆ.
ಕಲಬುರಗಿಯ ಸರ್ದಾರ್ ವಲ್ಲಭಬಾಯಿ ವೃತ್ತದ ಬಳಿ ಪ್ರತ್ಯೇಕ 'ಕಲ್ಯಾಣ ಕರ್ನಾಟಕ' ಧ್ವಜಾರೋಹಣಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಸುಮಾರು 30ಕ್ಕೂ ಹೆಚ್ಚು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನೊಂದೆಡೆ ಪೊಲೀಸರು ಬಂಧಿಸಲು ಮುಂದಾಗುತ್ತಿದ್ದಂತೆಯೇ ಹೋರಾಟಗಾರರು ಬಂಧನಕ್ಕೆ ಬೆದರಿ ಓಡಿ ಹೋಗುವ ಮೂಲಕ ನಗೆಪಾಟಲಿಗೀಡಾದರು. ಇನ್ನೊಂದಡೆ ಹೈದ್ರಾಬಾದ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರೂ ಸಹ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಪ್ರತ್ಯೇಕ ಹೋರಾಟ ನಡೆಸಿದರು. ಈ ಕಾರ್ಯಕರ್ತರನ್ನೂ ಸಹ ಪೊಲೀಸರು ವಶಕ್ಕೆ ತೆಗೆದುಕೊಂಡರು.
