ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ತಜ್ಞರ ಸಮಿತಿ ರಚನೆ ಪ್ರಶ್ನಿಸಿ ಶಶಿಧರ್ ಶಾನಭೋಗ್, ಸತೀಶ್ ಎಂಬುವವರು ಹೈಕೋರ್ಟ್'ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು (ಜ.05): ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ತಜ್ಞರ ಸಮಿತಿ ರಚನೆ ಪ್ರಶ್ನಿಸಿ ಶಶಿಧರ್ ಶಾನಭೋಗ್, ಸತೀಶ್ ಎಂಬುವವರು ಹೈಕೋರ್ಟ್'ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಇದನ್ನು ಪಿಐಎಲ್ ಎಂದು ಪರಿಗಣಿಸುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಹಾಗಾಗಿ ವಿಭಾಗೀಯ ಪೀಠಕ್ಕೆ ಅರ್ಜಿಯನ್ನು ವರ್ಗಾವಣೆ ಮಾಡಿದೆ. ತಜ್ಞರ ಸಮಿತಿಯ ಸಂವಿಧಾನಬದ್ಧತೆ ಪ್ರಶ್ನಿಸಿರುವ ಅರ್ಜಿದಾರರು, ಸರ್ಕಾರದ ಕ್ರಮದಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲಿದೆ. ಧಾರ್ಮಿಕ ವಿಚಾರಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ ಎಂದು ಆರೋಪಿಸಿದ್ದಾರೆ.
