ಮಿಜೋರಾಂ :  ಇನ್ನೇನು ಕೆಲವೇ ದಿನಗಳಲ್ಲಿ ಮಿಜೋರಾಂನಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. 

ಮಿಜೋರಾಂ ವಿಧಾನಸಭಾ ಸ್ಪೀಕರ್ ಹಿಪೇಯ್ ತಮ್ಮ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಡೆಪ್ಯುಟಿ ಸ್ಪೀಕರ್ ಆರ್ ಲಲ್ರಿನವ್ಮಾ ಅವರಿಗೆ  ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಅಂಗೀಕಾರ ಮಾಡಲಾಗಿದೆ. 

ಕಳೆದ 2013ರಲ್ಲಿ ನಡೆದ ಚುನಾವಣೆಯಲ್ಲಿ ಹಿಪೇಯ್ ಪಾಲಕ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಚುನಾವಣೆ ನಡೆಯುತ್ತಿರುವ ಹೊಸ್ತಿಲಲ್ಲೇ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. 

ಮಿಜೋರಾಂ ಒಂದರಲ್ಲೇ ಸದ್ಯ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದು, ಇಲ್ಲಿ ನವೆಂಬರ್ 28ರಂದು ಚುನಾವಣೆ ನಡೆಯುತ್ತಿದೆ.