ಲಕ್ನೋ, (ಜೂ.16): ಏಳು ವರ್ಷದ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. 

 48 ವರ್ಷದ ಪಪ್ಪು ರೈ ಎನ್ನುವಾತ ಬಾಲಕಿಯ ತಂದೆಗೆ ಪರಿಚಯಸ್ಥನೇ ಆಗಿದ್ದು, ಆರೋಪಿ ಪಪ್ಪು ರೈನನ್ನು ಸಿಕ್ರಿಗಂಜ್ ಪೊಲೀಸರು ಬಂಧಿಸಿದ್ದಾರೆ.

ಚಾಕೊಲೇಟ್ ಆಸೆ ತೋರಿಸಿ ಬೈಕಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರವೆಸಗಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಕಾಣೆಯಾಗಿರುವ ಕುರಿತು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಪಪ್ಪು ವಿರುದ್ಧ ಪೊಕ್ಸೊ ಸೇರಿದಂತೆ ಐಪಿಸಿ ಸೆಕ್ಷನ್ 364 (ಅಪಹರಣ), 376 (ಅತ್ಯಾಚಾರ) ಹಾಗೂ 302 (ಕೊಲೆ) ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. 

ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಯಯನ್ನು ವಿಚಾರಣೆ ನಡೆಸಿದ್ದಾರೆ.