ಸೂರತ್ ನಲ್ಲಿ ಭಾರೀ ಅಗ್ನಿ ಅವಘಡ| ಅಗ್ನಿ ದುರಂತದಲ್ಲಿ 19 ವಿದ್ಯಾರ್ಥಿಗಳ ಸಜೀವ ದಹನ| ಗುಜರಾತ್ ನ ಸೂರತ್ ನಗರದ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಘಟನೆ|
ಸೂರತ್, [ಮೇ.24]: ಸೂರತ್‌ನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಗುಜರಾತ್‌ನ ಸೂರತ್‌ನಲ್ಲಿ ವಾಣಿಜ್ಯ ಸಂಕೀರ್ಣದ 3ನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದೇ ಈ ಅಗ್ನಿ ದುರಂತಕ್ಕೆ ಕಾರಣವಾಗಿದೆ. ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಎಲ್ಲೆಡೆ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು 2ನೇ ಮಹಡಿಯಿಂದ ಕೆಲವರು ಧುಮಕಿದ್ದು, ಕೋಚಿಂಗ್ ಸೆಂಟರ್‌ನಲ್ಲಿದ್ದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇನ್ನು ಮಹಡಿಯಲ್ಲಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆಯನ್ನೂ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುಮಾರು 18ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
