ಸುರತ್, [ಜು. 25] ಗುಜರಾತಿನ ಬಿಜೆಪಿ ಶಾಸಕರೊಬ್ಬರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬಿಜೆಪಿ ಶಾಸಕ ಜಯಂತಿ ಭಾನುಶಾಲಿ ವಿರುದ್ಧ 21 ವರ್ಷ ವಯಸ್ಸಿನ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ. ಸಾಕ್ಷಿ ಎಂಬಂತೆ ಮಹಿಳೆಯೊಂದಿಗೆ ರಾಸಲೀಲೆ ನಡೆಸುತ್ತಿರುವ ವಿಡಿಯೋಗಳು ಮಾಧ್ಯಮಗಳಿಗೆ ಲಭ್ಯವಾಗಿದೆ.

ಸೋಶಿಯಲ್ ಮೀಡಿಯಾದಲ್ಲೂ ಬಿಜೆಪಿ ನಾಯಕನ ಕಾಮಕಾಂಡ ಬಯಲಾಗಿದೆ. ಸೂರತ್ ಮೂಲದ ಮಹಿಳೆ ತನ್ನ ನೋವಿನ ಕಥೆಯನ್ನು ಸ್ಥಳೀಯ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದು ನಂತರ ದೊಡ್ಡ ಸುದ್ದಿಯಾಗಿದೆ.

ಲೈಂಗಿಕ ಹಗರಣಕ್ಕೆ ಈ ಬಾರಿ ನೊಬೆಲ್ ಸಾಹಿತ್ಯ ಪ್ರಶಸ್ತಿ ಬಲಿ?

ಮಾಧ್ಯಮಗಳು ಮತ್ತು ಸಾರ್ವಜನಿಕರಿಂದ ಒತ್ತಡ ಬಂದ ನಂತರ ಭಾನುಶಾಲಿ ಅವರು ಶಾಸಕ ಸ್ಥಾನ ಹಾಗೂ ಗುಜರಾತ್ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ಸ್ಪಷ್ಟ ಪಡಿಸಿದೆ. ಸೂರತ್ ಪೊಲೀಸರು ಶಾಸಕ ಭಾನುಶಾಲಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಶಾಸಕರನ್ನು ಬಂಧಿಸಿದ್ದಕ್ಕೆ ಕಾನೂನು ಹೋರಾಟದ ಎಚ್ಚರಿಕೆಯನ್ನು ವಿಪಕ್ಷಗಳು ನೀಡಿವೆ.