ಎಚ್’ಬಿಆರ್ ಲೇಔಟ್’ನಲ್ಲಿ ಇಂದು ಮುಂಜಾನೆ 6.30ರ ಸುಮಾರಿಗೆ ಬಸ್ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಮುಕನೊಬ್ಬ ಹಿಂಬಾಲಿಸಿ ಲೈಂಗಿಕ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರು(ಜ. 06): ಕಮ್ಮನಹಳ್ಳಿಯ ಪೈಶಾಚಿಕ ಕೃತ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ನಗರದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಬಡಾವಣೆಯಲ್ಲೊಂದಾದ ಎಚ್’ಬಿಆರ್ ಲೇಔಟ್’ನಲ್ಲಿ ಇಂದು ಮುಂಜಾನೆ 6.30ರ ಸುಮಾರಿಗೆ ಬಸ್ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಮುಕನೊಬ್ಬ ಹಿಂಬಾಲಿಸಿ ಲೈಂಗಿಕ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ. ಘಟನೆಯಲ್ಲಿ ಕಾಮುಕನು ಮಹಿಳೆಯ ತುಟಿ ಹಾಗೂ ನಾಲಿಗೆಯನ್ನು ಕಚ್ಚಿ ಗಾಯಗೊಳಿಸಿದ್ದಾನೆ. ಅಲ್ಲದೆ ಈ ಸಂಪೂರ್ಣ ಘಟನೆಯೂ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕೆಲ ದಿನಗಳಿಂದ ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದೆ. ಡಿ.31ರ ಮಧ್ಯರಾತ್ರಿಯಂದು ಕಾಲೇಜು ಯುವತಿಯೊಬ್ಬಳಿಗೆ ಇಬ್ಬರು ದುರುಳರು ಲೈಂಗಿಕ ಹಿಂಸಾಚಾರ ನೀಡಿದ ಘಟನೆ ಮುರು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣ ಇನ್ನೂ ಬಿಸಿಯಲ್ಲಿರುವಾಗಲೇ ಈಗ ಹೆಚ್’ಬಿಆರ್ ಲೇಔಟ್’ನ ಪ್ರಕರಣ ಬೆಳಕಿಗೆ ಬಂದಿದೆ.
