ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಗೆ ವಾಚ್ಮ್ಯಾನ್ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಕೋಲಾರ(ಆ.29): ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಗೆ ವಾಚ್ಮ್ಯಾನ್ ಲೈಂಗಿಕ ಕಿರುಕುಳ ನೀಡುತ್ತಿದ್ದ.
ವಾಚ್ ಮ್ಯಾನ್ ನಾರಾಯಣಪ್ಪ ಹಲವು ದಿನಗಳಿಂದ ಬಾಲಕಿಯನ್ನು ಹಾಸ್ಟೆಲ್ ಮಹಡಿ ಮೇಲೆ ಬಲವಂತವಾಗಿ ಕರೆದುಕೊಂಡು ಹೋಗಿ ಬಟ್ಟೆ ಬಿಚ್ಚಿ ಅಮಾನುಷವಾಗಿ ನಡೆದುಕೊಳ್ಳುತ್ತಿದ್ದ. ಈ ವಿಷಯ ಬೇರೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ. ವಿದ್ಯಾರ್ಥಿನಿ ಕಾಲಿಗೆ ಗಾಯವಾಗಿತ್ತು. ಜೊತೆಗೆ ಜ್ವರ ಬಂದಿತ್ತು. ಹಾಸ್ಟೆಲ್ಗೆ ವಿದ್ಯಾರ್ಥಿನಿ ಪೋಷಕರು ಬಂದಾಗ ವಿಷಯ ಗೊತ್ತಾಗಿದೆ.
ಈ ಬಗ್ಗೆ ಜಿಲ್ಲಾ ಜಾಗೃತಿ ಸಮಿತಿಗೆ ವಿದ್ಯಾರ್ಥಿನಿ ಪೋಷಕರು ದೂರು ನೀಡಿದ್ದಾರೆ. ಬಾಲಕಿಗೆ ಚಿಕಿತ್ಸೆ ಕೊಡೆಸಿ ಬಂಗಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯ ಆರೋಪಿ ನಾರಾಯಣಪ್ಪ ತಲೆಮರೆಸಿಕೊಂಡಿದ್ದಾನೆ.
