ಮದರಸಾದಲ್ಲಿ ಶಿಕ್ಷಕನಾಗಿರುವ ಮಹಮ್ಮದ್ ಅಬ್ದುಲ್ ಜುಬೇರ್ ಆಲಿ ಎಂಬುವವರು ವಿದ್ಯಾರ್ಥಿಯನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಲಗಟ್ಟಪುರದಲ್ಲಿ ನಡೆದಿದೆ.

ಬೆಂಗಳೂರು (ಮಾ.25): ಮದರಸಾದಲ್ಲಿ ಶಿಕ್ಷಕನಾಗಿರುವ ಮಹಮ್ಮದ್ ಅಬ್ದುಲ್ ಜುಬೇರ್ ಆಲಿ ಎಂಬುವವರು ವಿದ್ಯಾರ್ಥಿಯನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಲಗಟ್ಟಪುರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿದ್ಯಾರ್ಥಿ ಮನೆಯಲ್ಲಿ ವಿಷಯ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಮದರಸಾದಲ್ಲಿ ಪಾಠ ಮಾಡುತ್ತಿದ್ದಾಗ ಶಿಕ್ಷಕ ಅಬ್ದುಲ್ ಜುಬೇರ್ ಆಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ 377 ಸೆಕ್ಷನ್ ನಡಿ ಪ್ರಕರಣ ದಾಖಲಾಗಿದೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.