ಬಸ್ಸಿಗೆ ಸಿಲುಕಿ ಸತ್ತ ವ್ಯಕ್ತಿಯ ಗುರುತು ಪತ್ತೆ ಮಾಡಿ

First Published 8, Feb 2018, 11:15 AM IST
Shanthinagar Dead Body Case
Highlights

ಇತ್ತೀಚಿಗೆ ಶಾಂತಿನಗರದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ಮೃತದೇಹದ ಗುರುತು ಪತ್ತೆಯು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ಸವಾಲಾಗಿದ್ದು, ಈಗ ಪ್ರಕರಣದ ತನಿಖೆಗೆ ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಬೆಂಗಳೂರು: ಇತ್ತೀಚಿಗೆ ಶಾಂತಿನಗರದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ಮೃತದೇಹದ ಗುರುತು ಪತ್ತೆಯು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ಸವಾಲಾಗಿದ್ದು, ಈಗ ಪ್ರಕರಣದ ತನಿಖೆಗೆ ಸಾರ್ವಜನಿಕರ ಸಹಕಾರ ಕೋರಿದ್ದಾರೆ. 35-40 ವರ್ಷದ ಅಪರಿಚಿತನ ಗುರುತು ಸಿಗುತ್ತಿಲ್ಲ. ಈ ಘಟನೆ ಬೆಳಕಿಗೆ ಬಂದು ನಾಲ್ಕು ದಿನಗಳು ಕಳೆದರೂ ಮೃತನ ಕಡೆಯವರ್ಯಾರು ಸಂಪರ್ಕಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫೆ.2ರಂದು ಚನ್ನಪಟ್ಟಣ ತಾಲೂಕಿನ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದ ಸಮೀಪ ರಸ್ತೆ ದಾಟುತ್ತಿದ್ದವನಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿದೆ.

ಆಗ ಬಸ್ ಚಕ್ರದಡಿಗೆ ಸಿಲುಕಿದ ಮೃತದೇಹವು ಮರುದಿನ ನಿಲ್ದಾಣದಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳ ಪರಿಶೀಲಿಸಲಾಗಿದ್ದು, ಚನ್ನಪಟ್ಟಣ ಸುತ್ತಮುತ್ತ ಮೃತನ ಕುರಿತು ವಿಚಾರಿಸಲಾಯಿತು.

ಆದರೆ ಯಾವುದೇ ಮಾಹಿತಿ ಸಿಗಲಿಲ್ಲ. ಅಲ್ಲಿ ಕರಪತ್ರ ಮುದ್ರಿಸಿ ಹಂಚಿದ್ದೇವೆ. ಅಲ್ಲದೆ ಸಾರ್ವಜನಿಕ ಸ್ಥಗಳಲ್ಲಿ ಭಿತ್ತಿ ಚಿತ್ರಗಳನ್ನು ಅಂಟಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಅಪರಿಚಿತನ ಬಗ್ಗೆ ಮಾಹಿತಿ ಇದ್ದರೆ ನೀಡುವಂತೆ ಮೊ.080-22 94 25 81 – 948080118ಗೆ ಕರೆ ಮಾಡುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.

 

loader