ಪುಣೆ(ಫೆ.10): ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ನಿತಿನ್ ಗಡ್ಕರಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವುದು ಆತಂಕ ತಂದಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಉನ್ನತ ನಾಯಕರ ಬಗ್ಗೆ ನೀಡಿದ ಹೇಳಿಕೆಯಿಂದ ಬಿಜೆಪಿ ನಾಯಕ ನಿತಿನ್ ಗಡ್ಕರಿ ಸುದ್ದಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಪರ್ಯಾಯವಾಗಿ ಗಡ್ಕರಿ ಅವರನ್ನು ಬೆಳೆಸಲಾಗುತ್ತಿದೆ ಎಂಬ ಗುಸುಗುಸು ಬಿಜೆಪಿ ವಲಯದಲ್ಲೇ ಕೇಳಿ ಬರುತ್ತಿವೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪವಾರ್, ಗಡ್ಕರಿ ನನ್ನ ಸ್ನೇಹಿತರಾಗಿದ್ದು, ಮೋದಿಗೆ ಪರ್ಯಾಯವಾಗಿ ಪ್ರಧಾನಿ ಹುದ್ದೆಗೆ ಗಡ್ಕರಿ ಅವರ ಹೆಸರನ್ನು ಮುಂದಿಡುತ್ತಿರುವುದು ಅವರ ಕುರಿತು ಆತಂಕ ಉಂಟು ಮಾಡಿದೆ ಎಂದು ಹೇಳಿದರು.