ನವದೆಹಲಿ(ಜು.28): ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ನಾಯಕನನ್ನು ಆಯ್ಕೆ ಮಾಡುವಲ್ಲಿ ಆಗುತ್ತಿರುವ ವಿಳಂಬದಿಂದ ಪಕ್ಷಕ್ಕೆ ಧಕ್ಕೆಯಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬಳಿಕ, ಆ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲ ಪಕ್ಷದ ಬೆಳವಣಿಗೆಗೆ ಮಾರಕವಾಗಿ ಪರಿಣಮಿಸಿದೆ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ.

ಪಕ್ಷಕ್ಕೆ ಯುವ ನಾಯಕತ್ವದ ಅವಶ್ಯಕತೆ ಇದ್ದು, ಒಂದು ವೇಳೆ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಿದರೆ ಒಳ್ಳೆಯದು ಎಂದು ತರೂರ್ ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನರ್’ರಚೆನೆಯ ಆಶಾವಾದ ವ್ಯಕ್ತಪಡಿಸಿರುವ ತರೂರ್, ಮೇಲ್ಮಟ್ಟದ ನಾಯಕತ್ವ ಪ್ರಬಲಗೊಂಡಂತೆಲ್ಲಾ ಕೆಳಮಟ್ಟದಲ್ಲಿ ಪಕ್ಷ ಬಲವರ್ಧನೆಗೊಳಲ್ಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.