ನವದೆಹಲಿ(ಆ.18): ಸದಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಾ, ಅವರ ನಾಯಕತ್ವವನ್ನು ಪ್ರಶ್ನಿಸುತ್ತಾ ಟ್ವೀಟ್ ಮಾಡುತ್ತಿದ್ದ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ, ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಹೊಗಳಿ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪ್ರಧಾನಿ ಮೋದಿ ಅವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಕೊಂಡಾಡಿರುವ ಶತ್ರುಘ್ನ ಸಿನ್ಹಾ, ಮೋದಿ ಅವರ ಭಾಷಣ ಸಂಶೋಧನಾತ್ಮಕ, ಅಭಿಪ್ರಾಯ ಪ್ರಚೋದಕ ಹಾಗೂ ಧೈರ್ಯದಿಂದ ಕೂಡಿತ್ತು ಎಂದು ಹೊಗಳಿದ್ದಾರೆ.

ಭಾರತ ಇಂದು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಅತ್ಯಂತ ಕರಾರುವಕ್ಕಾಗಿ ಪ್ರಸ್ತಾಪಿಸಿದ್ದು, ಅವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ತಮ್ಮ ಮನ ಮುಟ್ಟಿದೆ ಎಂದು ಸಿನ್ಹಾ ಹೇಳಿದ್ದಾರೆ.