Asianet Suvarna News Asianet Suvarna News

2019ರ ಚುನಾವಣೆ ವೇಳೆಗೆ ಶತ್ರುಘ್ನ ಸಿನ್ಹಾ ಬಿಜೆಪಿಗೆ ಗುಡ್‌ಬೈ?

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್‌ಟಿ ಕುರಿತು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ ಸಂಸದ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆಯುವ ಸಾಧ್ಯತೆಯಿದೆ.

Shatrughan Sinha quit BJP

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್‌ಟಿ ಕುರಿತು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ ಸಂಸದ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆಯುವ ಸಾಧ್ಯತೆಯಿದೆ.

2019ರ ಲೋಕಸಭಾ ಚುನಾವಣೆಗೂ ಮುನ್ನವೇ ಅವರು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಅಥವಾ ಮುಂಬರುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ಗುರುವಾರ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ‘2014ರಲ್ಲಿ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾದ ಬಿಜೆಪಿ ತಮ್ಮನ್ನು ನಡೆಸಿಕೊಂಡ ರೀತಿ ಮತ್ತು ಕೇವಲ 2 ಸೀಟು ಗೆಲ್ಲುವಷ್ಟುಸಾಮರ್ಥ್ಯವಿದ್ದ ಬಿಜೆಪಿ ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರ ನಾಯಕತ್ವದಲ್ಲಿ ಸುಮಾರು 200 ಸ್ಥಾನ ಗಳಿಸುವ ಸಾಮರ್ಥ್ಯ ಪಡೆಯಿತು.

ಅಂಥ ನಾಯಕನಿಗೆ ಇಂದು ಬಿಜೆಪಿಯಲ್ಲಿ ಇರುವ ಸ್ಥಾನಮಾನವಾದರೂ ಏನು?,’ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow Us:
Download App:
  • android
  • ios