ಬಿಜೆಪಿ ನಾಯಕರಾದ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ 50 ವರ್ಷಗಳ ಕಾಲ ದೇಶದ ಆಡಳಿತ ನಡೆಸುವ ಅತಿಯಾದ ವಿಶ್ವಾಸವನ್ನು ಹೊಂದಿದ್ದು, ಅವರ ರಹಸ್ಯ  ಇವಿಎಂ ನಲ್ಲಿ ಅಡಗಿದೆ ಎಂದು ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಹೇಳಿದ್ದಾರೆ. 

ಮುಂಬೈ : ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಇದೀಗ ಮತ್ತೊಮ್ಮೆ ವಾಕ್ ಪ್ರಹಾರ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದು ಒನ್ ಮ್ಯಾನ್ ಶೊ, ಟೂ ಮ್ಯಾನ್ ಆರ್ಮಿ ಎಂದು ಹೇಳಿದ್ದಾರೆ. ಇಂದಿಗೂ ಕೂಡ ಅವರು ಓವರ್ ಕಾನ್ಫಿಡೆನ್ಸ್ ಮೂಲಕವೇ ಮುಂದುವರಿಯುತ್ತಿದ್ದಾರೆ. ಮತಯಂತ್ರಗಳನ್ನು ತಮ್ಮ ಹಿಡಿತದಲ್ಲಿ ಇರಿಸಿಕೊಂಡು ಮುಂದಿನ 50 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸುವ ಅತಿಯಾದ ಭರವಸೆಯನ್ನು ಹೊಂದಿದ್ದಾರೆ ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ. 

ಇನ್ನು ಇದೇ ವೇಳೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರನ್ನು ಈ ವೇಳೆ ಹೊಗಳಿದ್ದು, ಯುವ ನಾಯಕನಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದಿದ್ದಾರೆ.

2019ರ ಲೋಕಸಭಾ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು, ಜನರು ದೇಶದ ಹಿತದೃಷ್ಟಿಯಿಂದ ಪಕ್ಷವನ್ನು ಆಯ್ಕೆ ಮಾಡುತ್ತಾರೆ ಎನ್ನುವ ವಿಶ್ವಾಸವನ್ನುಅವರು ವ್ಯಕ್ತಪಡಿಸಿದ್ದಾರೆ. 

Scroll to load tweet…