ಮೂರು ವರ್ಷಗಳಲ್ಲಿ 1 ಕೋಟಿ ಮನೆ ನಿರ್ಮಾಣದ ಗುರಿ ಹೊಂದಲಾಗಿದ್ದು, ಕೇಂದ್ರದಿಂದ ಬಡವರಿಗಾಗಿ ಹಲವು ಯೋಜನೆಗಳನ್ನು  ಜಾರಿಗೊಳಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಲಖನೌ (ನ.20): 2022ರ ವೇಳೆಗೆ ಬಡವರಿಗೆ ಸ್ವಂತ ಸೂರನ್ನು ಒದಗಿಸುವ ಗುರಿ ಸರ್ಕಾರ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರ ಪ್ರದೇಶದಲ್ಲಿ ಗ್ರಾಮೀಣ ವಸತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ, ದೇಶದ ಪ್ರತಿಯೊಬ್ಬರಿಗೂ ಸ್ವಂತ ಮನೆ ಇರಬೇಕು, ದೇಶದ ಪ್ರತಿಯೊಬ್ಬರಿಗೂ ಸೂರು ಒದಗಿಸಲು ಕೇಂದ್ರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಮೂರು ವರ್ಷಗಳಲ್ಲಿ 1 ಕೋಟಿ ಮನೆ ನಿರ್ಮಾಣದ ಗುರಿ ಹೊಂದಲಾಗಿದ್ದು, ಕೇಂದ್ರದಿಂದ ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಸೂರು ನಿರ್ಮಾಣದ ಜತೆಗೆ ಯುವಕರಿಗೆ ಉದ್ಯೋಗದ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ದೇಶದ ಬಡವರ ಬಲವರ್ಧನೆ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.