ಶಿಕಾರಿಪುರ :  ಕರ್ತವ್ಯದ ವೇಳೆ ಬಿಇಓ ಕಚೇರಿಯಲ್ಲಿ ಡಾಟಾ ಎಂಟ್ರಿ ಕಂಪ್ಯೂಟರ್ ಅಪರೇಟರ್ ಅಶ್ಲೀಲ ವಿಡಿಯೋ ವಿಕ್ಷಣೆ ಮಾಡಿದ ಪ್ರಕರಣ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ. 

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಡಾಟಾ ಎಂಟ್ರಿ ಅಪರೇಟರ್ ಸಂಕೇತ್ ಎಂಬ ಯುವಕ  ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿಯೇ ಈ ರೀತಿ ಅನುಚಿತವಾಗಿ ವರ್ತಿಸಿದ್ದಾರೆ. 

ಕಂಪ್ಯೂಟರ್ ಆಪರೇಟರ್ ಆಗಿರುವ ಯುವಕನ ವರ್ತನೆಯನ್ನು ಕಂಡ  ಸಾರ್ವಜನಿಕರು ಈ ಬಗ್ಗೆ ಬಿಇಓ ಸಿದ್ದಪ್ಪ ಅವರಿಗೆ ದೂರು ನೀಡಿದ್ದಾರೆ. ಆದರೆ ಬಿಇಒ ಮಾತ್ರ ಈ ಬಗ್ಗೆ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ.