ಇದೇ 20 ರಿಂದ ಶಿರಾಡಿ ಘಾಟ್ ಸಂಚಾರ ಬಂದ್

Shiradhi Ghat Close From 20th Jan
Highlights

ರಾಷ್ಟ್ರೀಯ ಹೆದ್ದಾರಿ-48ರ ಶಿರಾಡಿ ಘಾಟಿಯಲ್ಲಿ ರಸ್ತೆ ಕಾಮಗಾರಿ ಇರುವುದುರಿಂದ ಜ.20ರಿಂದ ಸಂಚಾರ ನಿರ್ಬಂಧಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಆದೇಶಿಸಿದೆ. ಕೆಂಪು ಹೊಳೆ ಗೆಸ್ಟ್ ಹೌಸ್‌ನಿಂದ ಅಡ್ಡಹೊಳೆವರೆಗಿನ ರಸ್ತೆ ಕಾಮಗಾರಿ ನಡೆಯಲಿದೆ.

ಉಡುಪಿ (ಜ.17): ರಾಷ್ಟ್ರೀಯ ಹೆದ್ದಾರಿ-48ರ ಶಿರಾಡಿ ಘಾಟಿಯಲ್ಲಿ ರಸ್ತೆ ಕಾಮಗಾರಿ ಇರುವುದುರಿಂದ ಜ.20ರಿಂದ ಸಂಚಾರ ನಿರ್ಬಂಧಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಆದೇಶಿಸಿದೆ. ಕೆಂಪು ಹೊಳೆ ಗೆಸ್ಟ್ ಹೌಸ್‌ನಿಂದ ಅಡ್ಡಹೊಳೆವರೆಗಿನ ರಸ್ತೆ ಕಾಮಗಾರಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಜ.20ರಂದು ಬೆಳಗ್ಗೆ 6ರಿಂದ ಕಾಮಗಾರಿ ಮುಕ್ತಾಯಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಆದೇಶ ಹೊರಡಿಸಿದೆ. ಜೂನ್ ವರೆಗೆ ಈ ಮಾರ್ಗದಲ್ಲಿ ವಾಹನ ಸಂಚಾರ ಪುನರಾರಂಭ ಗೊಳ್ಳುವುದು ಅನುಮಾನ ಎನ್ನಲಾಗಿದೆ.

loader