ಮಂಗಳೂರು (ಅ. 02): ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ರ ಶಿರಾಡಿ ಘಾಟ್‌ನಲ್ಲಿ ಕೊನೆಗೂ ಪ್ರಯಾಣಿಕ ಬಸ್ ಸಂಚಾರಕ್ಕೆ ಮುಕ್ತಿ ಸಿಕ್ಕಿದೆ.

ಆ.3 ರಿಂದ ಎಲ್ಲ ಬಗೆಯ ಬಸ್‌ಗಳು ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕು ಸಾಗಾಟ ವಾಹನಗಳ ಸಂಚಾರಕ್ಕೆ ಆಸ್ಪದವಿಲ್ಲ.

2 ವಾರಗಳ ಕಾಲ ಪರಿಶೀಲನೆ ನಡೆಸಿದ ಬಳಿಕ ಟ್ರಕ್ ಮುಂತಾದ ಘನ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದರು.