2019ರ ಲೋಕಸಭಾ ಚುನಾವಣೆ ವಿವಿಧ ಪಕ್ಷಗಳು ಸಿದ್ಧತೆ ನಡೆಸಿಕೊಂಡಿವೆ. ಅತ್ತ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ನೇತೃತ್ವ ವಿಪಕ್ಷಗಳು ಮಾಸ್ಟರ್  ಪ್ಲಾನ್ ಮಾಡುತ್ತಿವೆ. 

ನವದೆಹಲಿ : 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ. 

ಇನ್ನೊಂದೆಡೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗಿದೆ.

ಇನ್ನು ಇದೇ ವೇಳೆ ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳು ಹರಡಿದ್ದು, ಆದರೆ ಈ ವಿಚಾರವನ್ನು ಇದೀಗ ಕಾಂಗ್ರೆಸ್ ನಿರಾಕರಿಸಿದೆ.