ಅವಿಶ್ವಾಸ ಗೊತ್ತುವಳಿ ನಿರ್ಣಯದ ವೇಳೆ ಗೈರಾಗಿದ್ದ ಶಿವ ಸೇನೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ದೇಶದಲ್ಲಿ ಕಟುಕರ ಆಡಳಿತವಿದ್ದು, ಮನುಷ್ಯರಿಗಿಂತ ಪ್ರಾಣಿಗಳಿಗೆ ಪ್ರಾತಿನಿಧ್ಯ ನೀಡುತ್ತಾರೆ ಎಂದು ಹೇಳಿದೆ. 

ಮುಂಬೈ: ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ಗೊತ್ತುವಳಿ ವೇಳೆ ಗೈರಾಗುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ನೆರವಾಗಿರುವ ಶಿವಸೇನೆ, ಬಿಜೆಪಿ ಸರ್ಕಾರವನ್ನು ಕಟುಕರ ಸರ್ಕಾರ ಎಂದು ಟೀಕಿಸಿದೆ. 

ಪಕ್ಷದ ಮುಖ ವಾಣಿ ಸಾಮ್ನಾದಲ್ಲಿ ಬರೆದಿರುವ ಸಂಪಾದಕೀ ಯದಲ್ಲಿ ‘ಹಣಬಲ, ಅಧಿಕಾರ ದುರುಪಯೋಗ, ಇವಿಎಂಗಳನ್ನು ತಿರುಚಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೇಶದಲ್ಲಿ ಅಧಿಕಾರದಲ್ಲಿ ಇರುವವರು ಕಟುಕರು.

ಅವರು ಪ್ರಾಣಿಗಳನ್ನು ರಕ್ಷಿಸುತ್ತಾರೆ ಆದರೆ, ಮನುಷ್ಯರನ್ನೇ ಹತ್ಯೆ ಮಾಡುತ್ತಾರೆ. ಹೇಗಾದರೂ ಮಾಡಿ ಅಧಿಕಾರದಲ್ಲಿ ಇರುವುದು ಪ್ರಜಾಪ್ರಭುತ್ವ ಅಲ್ಲ ಎಂದು ಟೀಕಿಸಿದೆ.