ತುಮಕೂರಿನ ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದೆ. 

ಬೆಂಗಳೂರು (ಜ.26): ತುಮಕೂರಿನ ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಇದರಿಂದ ಚಿಕಿತ್ಸೆಗಾಗಿ ಶಿವಕುಮಾರ ಸ್ವಾಮೀಜಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಶ್ರೀಗಳನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಶೀತ, ಕಫ, ಜ್ವರದ ಸಮಸ್ಯೆಯಿಂದ ಶ್ರೀಗಳು ಬಳಲುತ್ತಿರುವ ನಿಟ್ಟಿನಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ.