ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್, ತಮ್ಮ ಪ್ರೇಮ ಪುರಾಣವನ್ನು ಬಿಚ್ಚಿಟ್ಟಿದ್ದಾರೆ.

ಮುಂಬೈ (ಡಿ.29): ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್, ತಮ್ಮ ಪ್ರೇಮ ಪುರಾಣವನ್ನು ಬಿಚ್ಚಿಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ಅವರ ಮೇಲೆ ನನಗೆ ಪ್ರೀತಿ ಹುಟ್ಟಿತ್ತು. ಆಕೆಯನ್ನು ಒಮ್ಮೆ ಭೇಟಿಯಾದಾಗ, ನನ್ನ ಪ್ರೀತಿ ಒಪ್ಪಿಕೊಳ್ಳದಿದ್ದರೆ ಅಪಹರಣ ಮಾಡುತ್ತೇನೆ ಎಂದು ಬೆದರಿಸಿದ್ದೆ’ ಎಂದು ಅಖ್ತರ್ ಪತ್ರಿಕೆವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಹಿರಂಗಗೊಳಿಸಿದ್ದಾರೆ. ‘ಸೋನಾಲಿ ಎಂದರೆ ನನಗೆ ಬಹಳ ಇಷ್ಟವಿತ್ತು. ನನ್ನ ಪರ್ಸ್‌ನಲ್ಲಿ ಆಕೆಯ ಫೋಟೋವನ್ನು ಸಹ ಇಟ್ಟುಕೊಂಡಿದ್ದೆ. ಆದರೆ ನನ್ನ ಪ್ರೀತಿಯನ್ನು ಆಕೆ ಒಪ್ಪಿಕೊಳ್ಳಲಿಲ್ಲ’ ಎಂದು ಅಖ್ತರ್ ಬೇಸರ ವ್ಯಕ್ತಪಡಿಸಿದ್ದಾರೆ.