ಮದರಸಾದಲ್ಲಿ ಒತ್ತೆಯಾಳಾಗಿ ಇರಿಸಿಕೊಂಡ 51 ವಿದ್ಯಾರ್ಥಿನಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.  ಈ ಎಲ್ಲಾ ವಿದ್ಯಾರ್ಥಿನಿಯರನ್ನು ಕೂಡ ಇಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ.

ಲಕ್ನೋ (ಡಿ.30): ಮದರಸಾದಲ್ಲಿ ಒತ್ತೆಯಾಳಾಗಿ ಇರಿಸಿಕೊಂಡ 51 ವಿದ್ಯಾರ್ಥಿನಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಎಲ್ಲಾ ವಿದ್ಯಾರ್ಥಿನಿಯರನ್ನು ಕೂಡ ಇಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ. ಲಕ್ನೋದ ಶಹದಾಟ್ಗಂಜ್ ಪ್ರದೇಶದಲ್ಲಿರುವ ಮದರಸಾದಿಂದ ಎಲ್ಲಾ ವಿದ್ಯಾರ್ಥಿನಿಯರನ್ನೂ ರಕ್ಷಣೆ ಮಾಡಲಾಗಿದೆ.

ಈ ಮದರಸಾದಲ್ಲಿ ಒಟ್ಟು 125 ವಿದ್ಯಾರ್ಥಿನಿಯರು ಶಿಕ್ಷಣ ಪಡೆದುಕೊಳ್ಳುತ್ತಿದ್ದು, ಅಲ್ಲಿ ನಡೆಯುವ ದೌರ್ಜನ್ಯದ ಬಗ್ಗೆ ಕೆಲ ವಿದ್ಯಾರ್ಥಿನಿಯರು ದೂರು ದಾಖಲು ಮಾಡಿದ್ದರು. ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿದ್ದರು ಎನ್ನಲಾಗಿದೆ. ಸದ್ಯ ಲಕ್ನೋ ಪೊಲೀಸರ ತಂಡ ದಾಳಿ ನಡೆಸಿ 51 ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದಾರೆ.

ಬಳಿಕ ಇಲ್ಲಿ ಸಮಸ್ಯೆಗೆ ಒಳಗಾಗಿದ್ದ ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಲಕ್ನೋ ಪೊಲೀಸ್ ಆಯುಕ್ತರಾದ ದೀಪಕ್ ಕುಮಾರ್ ಹೇಳಿದ್ದಾರೆ.