ನವದೆಹಲಿ(ಸೆ.20): ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ತನ್ನ ಪ್ರೇಯಸಿಯನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಕೊಲೆಗೈದಿದ್ದಾನೆ.
ಇಲ್ಲಿನ ಬುರಾರಿ ಪ್ರದೇಶದಲಿ 34 ವರ್ಷದ ಸುರೇಂದರ್ ಎಂಬಾತ ತನ್ನ ಪ್ರೇಯಿಸಿ 22 ವರ್ಷದ ಜಿಯಾಳನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ 21 ಬಾರಿ ಚಾಕುವಿನಿಂದ ಚುಚ್ಚಿ ಹತ್ಯೆಗೈದಿದ್ದಾನೆ.
ಬರ್ಬರ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಸುರೇಂದರ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕಣ್ಣೆದುರೇ ಕೊಲೆ ನಡೆಯುತ್ತಿದ್ದರೂ ಸಾರ್ವಜನಿಕರು ನೋಡುತ್ತಾ ನಿಂತಿದ್ದು ಯಾರೊಬ್ಬರೂ ಸಹಾಯಕ್ಕೆ ಆಗಮಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
