ನವದೆಹಲಿ(ಸೆ.06): ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲದ 100ಕ್ಕೂ ಹೆಚ್ಚು ಉಗ್ರರು ಭಾರತದ ಮೇಲೆ ದಾಳಿ ಮಾಡಲು ಕಾದಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಜಿತ್ ಧೋವಲ್ ಅವರು ಈ ಆಘಾತಕಾರಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಉರಿ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿ ಬಳಿಕ ಗಡಿಯಲ್ಲಿ ಉಗ್ರಗಾಮಿ ಚಟುವಟಿಕೆಗಳು ಹೆಚ್ಚಾಗಿದ್ದು, ಯಾವುದೇ ಸಂದರ್ಭದಲ್ಲಿ ಉಗ್ರರು ಭಾರತ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.